ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ಅವರು ರಾಜೀನಾಮೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಫೆ. 9 ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಜೆಡಿಎಸ್ನ ಬಸವರಾಜ ಹೊರಟ್ಟಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.
ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿರುವ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ, ತೆರವಾಗಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಸಂಬಂಧ ತುರ್ತು ಸಭೆ ನಡೆಸಲಾಗಿದ್ದು, ವಿಧಾನ ಪರಿಷತ್ ಕಲಾಪವನ್ನು ಮುಂದೂಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಫೆ. 8 ರಂದು ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಫೆ. 9 ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ವಿಧಾನ ಪರಿಷತ್ ಸಭಾಪತಿಯಾಗಿದ್ದ ಪ್ರತಾಪಚಂದ್ರ ಶೆಟ್ಟಿ ಅವರ ವಿರುದ್ಧ ಬಿಜೆಪಿ ಅವಿಶ್ವಾಸ ಮಂಡಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಾಪಚಂದ್ರ ಶೆಟ್ಟಿ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ತೆರವಾಗಿರುವ ಸಭಾಪತಿ ಸ್ಥಾನಕ್ಕೆ ಫೆ. 9 ರಂದು ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.