ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಶುಕ್ರವಾರ ಇಡೀ ಕೇಂದ್ರಾಡಳಿತ ಪ್ರದೇಶದಲ್ಲಿ 4 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸುವುದಾಗಿ ಘೋಷಿಸಿದೆ
“4 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದಲ್ಲಿ ಮರುಸ್ಥಾಪಿಸಲಾಗುತ್ತಿದೆ” ಎಂದು ಸರ್ಕಾರದ ವಕ್ತಾರ ರೋಹಿತ್ ಕನ್ಸಾಲ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಜಮ್ಮು ವಿಭಾಗದ ಉಧಂಪುರ್ ಮತ್ತು ಕಾಶ್ಮೀರ ವಿಭಾಗದ ಗಂದರ್ಬಾಲ್ ಎಂಬ ಎರಡು ಜಿಲ್ಲೆಗಳಲ್ಲಿ ಮಾತ್ರ 4 ಜಿ ಮೊಬೈಲ್ ಸೇವೆಗಳು ಲಭ್ಯವಿದ್ದವು.
ಕೇಂದ್ರಾಡಳಿತ ಪ್ರದೇಶದ ಇತರ 18 ಜಿಲ್ಲೆಗಳಲ್ಲಿ ಕೇವಲ 2 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳಿವೆ.
ಆರ್ಟಿಕಲ್ 370 ಅನ್ನು ರದ್ದುಪಡಿಸಿ, ರಾಜ್ಯವನ್ನು ವಿಭಜಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊಬೈಲ್ ಟೆಲಿಫೋನಿ ಮತ್ತು ಇಂಟರ್ನೆಟ್ ಸೇವೆಗಳನ್ನು ಆಗಸ್ಟ್ 5, 2019 ರಂದು ಸ್ಥಗಿತಗೊಳಿಸಲಾಯಿತು.
ಐದು ತಿಂಗಳ ನಂತರ ಮೊಬೈಲ್ ದೂರವಾಣಿಯನ್ನು ಪುನಃಸ್ಥಾಪಿಸಲಾಗಿದ್ದರೂ, ಕಾನೂನು ಸುವ್ಯವಸ್ಥೆ ಕಾಪಾಡಲು ಅಂತರ್ಜಾಲ ಸೇವೆಗಳ ಮೇಲಿನ ನಿರ್ಬಂಧಗಳನ್ನು ಮುಂದುವರೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.