ಬೆಂಗಳೂರು: ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಸರಿಯಾದ ಅರಿವು ಮೂಡಿಸಬೇಕಿದೆ. ಈ ಕಾಯ್ದೆಗಳು ಕೃಷಿಕರ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಹೆಚ್ಚು ಅನುಕೂಲಕರವಾಗಿವೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಬಗ್ಗೆ ರೈತರನ್ನು, ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನದಲ್ಲಿ ತೊಡಗಿವೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನೂತನ ಕಾಯ್ದೆಗಳನ್ನು ಜಾರಿಗೆ ತರುವುದರಿಂದ ಈಗಾಗಲೇ ಇರುವ ಕಾಯ್ದೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ರೈತರಿಗೆ ತಾವು ಬೆಳೆದ ಉತ್ಪನ್ನಗಳ ಮಾರಾಟದ ವಿಚಾರದಲ್ಲಿ ಮತ್ತಷ್ಟು ಸ್ವಾತಂತ್ರ್ಯ ಲಭಿಸಿದಂತಾಗುತ್ತದೆ. ಈ ನೂತನ ಕಾಯ್ದೆಗಳ ಮೂಲಕ ಅವರ ಉತ್ಪನ್ನಗಳಿಗೆ ನ್ಯಾಯಯುತವಾದ ಬೆಲೆ ದೊರೆಯುವುದೂ ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
ನೂತನ ಕಾಯ್ದೆಗಳಿಂದ ರೈತರನ್ನು ವ್ಯಾಪಾರಸ್ಥರ ಕಪಿಮುಷ್ಟಿಗೆ ಒಪ್ಪಿಸಿದಂತಾಗುವುದಿಲ್ಲ. ಬದಲಾಗಿ, ರೈತರಿಗೆ ತಾವು ಬಯಸಿದಲ್ಲಿ ಯಾವುದೇ ನಿರ್ಧಿಷ್ಟ ಗಡಿಗಳಿಲ್ಲದೆ, ತಾವೇ ನಿಗದಿ ಮಾಡುವ ಬೆಲೆಗೆ ಬೆಳೆ ಮಾರಾಟ ಮಾಡುವುದು ಸಾಧ್ಯವಾಗಲಿದೆ. ಇಂತಹ ಉತ್ತಮ ಕಾಯ್ದೆಯ ಬಗ್ಗೆ ರಾಜಕೀಯ ಮಾಡುವುದು, ಅಪಪ್ರಚಾರ ಮಾಡುವುದನ್ನು ಕೆಲವರು ಮಾಡುತ್ತಿದ್ದು, ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.