ಬೆಂಗಳೂರು: ಶ್ರೀ ಮಠದಲ್ಲಿ ಗುರುಕುಲ ಪದ್ಧತಿ, ವಿಶ್ವವಿದ್ಯಾಲಯಗಳು ಲಭ್ಯವಿದೆ. ಇಲ್ಲಿ ಪರಿಶಿಷ್ಟ ಜಾತಿ ಮತ್ತು ಜನಾಂಗದ ಅವರ ಸಂಸ್ಕೃತಿ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳು ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಅವರ ಸಮುದಾಯದ ಕಲೆ, ಸಂಸ್ಕೃತಿ ಸೇರಿದಂತೆ ಇನ್ನೂ ಅನೇಕ ವಿಚಾರಗಳಲ್ಲಿ ಆಧುನಿಕ ಶಿಕ್ಷಣ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತವಾಗಿರುವ ಶ್ರೀಮಠ ಚಂದ್ರಗುಪ್ತ ಗುರುಕುಲದಲ್ಲಿ ಪರಿಶಿಷ್ಟ ಜಾತಿಯವರಿಗೆ ಆಧುನಿಕ ಶಿಕ್ಷಣ ಕಲ್ಪಿಸಲು ಪೂರಕವಾದ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿದೆ ಎಂದು ತಿಳಿಸಿದ್ದಾರೆ.
ಮುಂದಿನ ಜೂನ್ ತಿಂಗಳಲ್ಲಿ ತ್ರಿವೇಣಿ ಮತ್ತು ಚಂದ್ರಗುಪ್ತ ಗುರುಕುಲಗಳು ಆರಂಭವಾಗಲಿವೆ. ತ್ರಿವೇಣಿ ಗುರುಕುಲದಲ್ಲಿ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತದೆ. ನಮ್ಮ ಗುರುಕುಲದಲ್ಲಿ ಎಲ್ಲಾ ಜಾತಿ, ಧರ್ಮಗಳ ವಿದ್ಯಾರ್ಥಿಗಳಿದ್ದಾರೆ. ಭಾರತೀಯ ಪರಂಪರೆಯ ಉಳಿವಿಗಾಗಿ ಗುರುಕುಲಗಳನ್ನು ಸ್ಥಾಪನೆ ಮಾಡಲಾಗಿದೆ. ಇಲ್ಲಿನ ಗುರುಕುಲ, ವಿಶ್ವವಿದ್ಯಾಲಯಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನೂ ನೀಡಲಾಗುತ್ತದೆ ಎಂದು ಶ್ರೀ ಗಳು ತಿಳಿಸಿದ್ದಾರೆ.
ಪ್ರಸ್ತುತ ಶ್ರೀ ಮಠದ ಗುರುಕುಲದಲ್ಲಿ 300 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದು, ಭಾರತೀಯ ಸಂಸ್ಕೃತಿ-ಪರಂಪರೆಯನ್ನು ವಿದ್ಯಾರ್ಥಿಗಳಲ್ಲಿ ತುಂಬುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಗುರುಕುಲ ಮತ್ತು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.