ಬೆಂಗಳೂರು: ರಾಜ್ಯದಲ್ಲಿ ಗಣಿಗಾರಿಕೆಗೆ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೈಗಾರಿಕಾ ವಲಯದಲ್ಲಿ ಹೂಡಿಕೆ ಮಾಡುವವರಿಗೆ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅದಕ್ಕೆ ಅನುಗುಣವಾಗಿ ಗಣಿಗಾರಿಕಾ ಪ್ರಸ್ತಾವನೆಗೂ ಶೀಘ್ರಗತಿಯಲ್ಲಿ ಪರವಾನಿಗೆ ನೀಡಲು ಪೂರಕ ಕ್ರಮ ಕೈಗೊಳ್ಳಲಾಗುವುದು. ಬಂಡವಾಳ ಹೂಡಿಕೆ ಉತ್ತೇಜನ ನೀಡುವ ದೃಷ್ಟಿಯಿಂದ ಏಕಗವಾಕ್ಷಿ ವ್ಯವಸ್ಥೆಯೂ ಪೂರಕವಾಗಲಿದೆ ಎಂದು ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. 5 ಕೋಟಿಗಿಂತ ಕಡಿಮೆ ಮೊತ್ತದ ಅನುಮೋದನೆಗಳನ್ನು ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ನೀಡುತ್ತಾರೆ. ಅದಕ್ಕಿಂತ ಹೆಚ್ಚು ಮೊತ್ತದ ಪ್ರಸ್ತಾವನೆಗಳು ಇಲಾಖೆಯ ಸಚಿವರ ಅಧ್ಯಕ್ಷತೆಯ ರಾಜ್ಯ ಸಮಿತಿಯ ಮುಂದೆ ನಿರ್ಧರಿತವಾಗುತ್ತದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.