ಬೆಂಗಳೂರು: ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತಾವು ದಕ್ಷರು, ಪ್ರಾಮಾಣಿಕರು ಎಂಬುದನ್ನು ರಾಜ್ಯದ ಪೊಲೀಸರು ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
2019 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನಿಸಿ ಮಾತನಾಡಿದ ಅವರು, ಕರ್ತವ್ಯ ಪರತೆ, ಉಗ್ರಗಾಮಿ ಹಾಗೂ ನಕ್ಸಲ್ ಚಳುವಳಿಗಳ ನಿಗ್ರಹ, ಕಾನೂನು ಮತ್ತು ಸುವ್ಯವಸ್ಥೆ, ಗುಪ್ತವಾರ್ತೆ, ಸಂಗ್ರಹ, ರಸ್ತೆ ಸಂಚಾರ, ಸುರಕ್ಷಿತ, ಅಸಾಧಾರಣ, ಸಾಮರ್ಥ್ಯ ತೋರಿಸಿದ ಪೊಲೀಸರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯ ಮೂಲ ಸೌಕರ್ಯಗಳ ಉನ್ನತೀಕರಣ, ಕರ್ತವ್ಯ ನಿರ್ವಹಣೆ, ಆಧುನಿಕ ತಂತ್ರಜ್ಞಾನದ ಸೌಕರ್ಯವನ್ನು ಸರ್ಕಾರದ ವತಿಯಿಂದ ಪೂರೈಕೆ ಮಾಡಲಾಗಿದೆ. ಇತ್ತೀಚೆಗೆ ಕೇಂದ್ರ ಗೃಹ ಸಚಿವರಿಂದ ತುರ್ತು ಸ್ಪಂದನಾ ವಿಭಾಗದಲ್ಲಿ ಕಾರ್ಯಾಚರಣೆಗೆ 150 ವಾಹನಗಳಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ @BSYBJP ರವರು ಗೃಹ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 2019ನೇ ಸಾಲಿನ 'ಮುಖ್ಯಮಂತ್ರಿಗಳ ಪದಕ' ಪ್ರದಾನ ಮಾಡಿದರು. (1/2) pic.twitter.com/zOgnolixg9
— CM of Karnataka (@CMofKarnataka) February 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.