ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಂಬಂಧಿಸಿದಂತೆ 7,091 ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ.
ರಾಜ್ಯ ಹಣಕಾಸು ಇಲಾಖೆಗೆ 14,813 ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪೈಕಿ 50% ಉಪನ್ಯಾಸಕರ ನಿಯೋಜನೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ.
ಮಾರ್ಚ್ ವರೆಗೆ ಮಾತ್ರ ಈ ಸೇವೆಯನ್ನು ಮುಂದುವರೆಸುವಂತೆಯೂ ಹೇಳಿದೆ. ಕಾಲೇಜುಗಳಲ್ಲಿ ಬೋಧಕರ ಕೊರತೆ ನೀಗಲು ಈ ಪ್ರಸ್ತಾವನೆಗೆ ಅನುಮತಿ ನೀಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.