ಬೆಂಗಳೂರು: ದೇಶದಲ್ಲಿ ಹಲವು ಭಾಷೆಗಳಿದ್ದು, ಎಲ್ಲಾ ಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ʼಭಾಷಾ ಭಾರತ-ಬಲಿಷ್ಟ ಭಾರತʼ ರಾಷ್ಟ್ರೀಯ ಮಟ್ಟದ ಭಾರತೀಯ ಭಾಷೆಗಳ ದುಂಡುಮೇಜಿನ ಪರಿಷತ್ ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಎಲ್ಲಾ ಭಾಷೆಗಳಿಗೂ ಗೌರವ ನೀಡುತ್ತದೆ. ಈ ದೃಷ್ಟಿಕೋನವನ್ನಿರಿಸಿಕೊಂಡೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಹ ಜಾರಿಗೆ ತರಲಾಗಿದೆ. ಜೊತೆಗೆ ಜೆಇಇ ಮತ್ತು ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮಾತೃಭಾಷೆಯಲ್ಲೇ ಬರೆಯುವುದಕ್ಕೂ ವಿದ್ಯಾರ್ಥಿಗಳಿಗೆ ಸರ್ಕಾರ ಅವಕಾಶವನ್ನು ಒದಗಿಸಿರುವುದಾಗಿಯೂ ಅವರು ತಿಳಿಸಿದ್ದಾರೆ. ಹಾಗೆಯೇ ಭಾರತೀಯ ಭಾಷಾ ಅನುವಾದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ನಲ್ಲಿಯೂ ಅನುದಾನವನ್ನು ನೀಡಲಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.