ನವದೆಹಲಿ: ಕಳೆದ 5 ವರ್ಷಗಳಲ್ಲಿ 2015 ರಿಂದ 2019 ರ ನಡುವೆ 6.76 ಲಕ್ಷಕ್ಕೂ ಹೆಚ್ಚು ಭಾರತೀಯರು ಭಾರತೀಯ ಪೌರತ್ವವನ್ನು ತ್ಯಜಿಸಿ ಇತರ ದೇಶಗಳ ಪೌರತ್ವವನ್ನು ಪಡೆದುಕೊಂಡಿದ್ದಾರೆ ಎಂದು ಮಂಗಳವಾರ ಲೋಕಸಭೆಗೆ ಕೇಂದ್ರ ಮಾಹಿತಿ ನೀಡಿದೆ.
ಒಟ್ಟು 1,24,99,395 ಭಾರತೀಯ ಪ್ರಜೆಗಳು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಹೇಳಿದರು.
“ವಿದೇಶಾಂಗ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 1,24,99,395 ಭಾರತೀಯ ಪ್ರಜೆಗಳು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ” ಎಂದು ನಿತ್ಯಾನಂದ್ ರಾಯ್ ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
2015 ರಲ್ಲಿ 1,41,656 ಭಾರತೀಯರು, 2016 ರಲ್ಲಿ 1,44,942 ಭಾರತೀಯರು, 2017 ರಲ್ಲಿ 1,27,905, 2018 ರಲ್ಲಿ 1,25,130 ಮತ್ತು 1,36,441 ಭಾರತೀಯರು 2019 ರಲ್ಲಿ ಭಾರತೀಯ ರಾಷ್ಟ್ರೀಯತೆಯನ್ನು ತ್ಯಜಿಸಿದ್ದಾರೆ ಎಂದಿದ್ದಾರೆ.
ದ್ವಿ ಪೌರತ್ವ ನೀಡುವ ಯಾವುದೇ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.