ನವದೆಹಲಿ: ಭಾರತದ ವಿರುದ್ಧ ಇರುವ ವಿಷಯವನ್ನು ತೆಗೆದು ಹಾಕುವಂತೆ ನೀಡಿದ ಆದೇಶಗಳನ್ನು ಪಾಲಿಸದೇ ಇರುವ ಟ್ವಿಟರ್ಗೆ ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನೀಡಿದೆ.
ಸ್ಥಳೀಯ ಕಾನೂನುಗಳನ್ನು ಪಾಲಿಸುವಂತೆ ಖಡಕ್ ವಾರ್ನಿಂಗ್ ನೀಡಲಾಗಿದೆ. ಇನ್ನೊಂದೆಡೆ, ಹಲವಾರು ಪ್ರಮುಖ ರಾಜಕಾರಣಿಗಳು ಮತ್ತು ಶಾಸಕರು ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದಾರೆ. ಟ್ವಿಟರ್ಗೆ ಭಾರತೀಯ ಪರ್ಯಾಯವಾಗಿರುವ ಕೂ ಆ್ಯಪ್ಗೆ ಅನೇಕ ಸಚಿವರು ಸೇರ್ಪಡೆಯಾಗಿದ್ದಾರೆ ಮತ್ತು ತಮ್ಮ ಬೆಂಬಲಿಗರಿಗೂ ಸೇರುವಂತೆ ಒತ್ತಾಯಿಸಿದ್ದಾರೆ.
ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ವ್ಯಾಪಕ ಪ್ರತಿಭಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವ 1,100 ಕ್ಕೂ ಹೆಚ್ಚು ಖಾತೆಗಳು ಮತ್ತು ಪೋಸ್ಟ್ಗಳನ್ನು ತೆಗೆದುಹಾಕುವಂತೆ ಸರ್ಕಾರ ಟ್ವಿಟರ್ಗೆ ಆದೇಶಿಸಿದ ನಂತರ ಈ ಬೆಳವಣಿಗೆ ಪ್ರಾರಂಭವಾಗಿದೆ.
ಕೆಲವು ಟೇಕ್-ಡೌನ್ ಆದೇಶಗಳು ಸ್ಥಳೀಯ ಕಾನೂನಿಗೆ ಅನುಗುಣವಾಗಿಲ್ಲ ಎಂದು ನಂಬಿದ್ದರಿಂದ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಪಾಲಿಸಲಿಲ್ಲ ಎಂದು ಬುಧವಾರ ಬ್ಲಾಗ್ ಪೋಸ್ಟ್ ಟನ್ ನಲ್ಲಿ ಟ್ವಿಟರ್ ಹೇಳಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಕೆರಳಿಸಿದೆ.
“ಸಂರಕ್ಷಿತ ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ನಮ್ಮ ತತ್ವಗಳಿಗೆ ಅನುಗುಣವಾಗಿ, ಸುದ್ದಿ ಮಾಧ್ಯಮ ಘಟಕಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ನಾವು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಟ್ವಿಟರ್ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.