ನವದೆಹಲಿ: ಮಂಗಳೂರು-ಉಡುಪಿಯನ್ನು ಹೆದ್ದಾರಿ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್ನ್ನು ರದ್ದುಪಡಿಸುವ ಬಗ್ಗೆ ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ನವದೆಹಲಿಯ ಕೇಂದ್ರ ಸಚಿವರ ನಿವಾಸದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ರಾಜ್ಯ ಸಂಸದರ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ರಾಜ್ಯದ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ಈ ವೇಳೆ ಕೇಂದ್ರ ಸಚಿವರ ಹಲವು ಯೋಜನೆಗಳ ಬಗ್ಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಸಣ್ಣೂರು- ಬಿಕರ್ನಕಟ್ಟೆ ರಸ್ತೆ ಚತುಷ್ಪಥ ಕಾಮಗಾರಿಗೆ ಈಗಾಗಲೇ ಟೆಂಡರ್ ಪೂರ್ಣಗೊಂಡಿದೆ. ಭಾರತ್ ಮಾಲಾ ಯೋಜನೆಯಡಿ ದ್ವಿಪಥ ರಸ್ತೆಯಾಗಿರುವ ಮುಲ್ಕಿ- ಕಟೀಲು- ಕೈಕಂಬ- ಪೊಳಲಿ- ಬಿ.ಸಿ.ರೋಡು- ಪಾಣೆಮಂಗಳೂರು- ತೊಕ್ಕೊಟ್ಟು ಸಂಪರ್ಕಿಸುವ ಮಂಗಳೂರು ನಗರ ಹೊರವರ್ತುಲ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.
ಮಂಗಳೂರು- ಬೆಂಗಳೂರು ಸಂಪರ್ಕಿಸಲು ಪರ್ಯಾಯ ರಸ್ತೆಯಾದ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯನ್ನು ಮಾಣಿಯಿಂದ ಕುಶಾಲನಗರದವರೆಗೆ ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಪರಿಗಣಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.