ಬೆಂಗಳೂರು: ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಸಂಬಂಧ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಮೇ 24 ರಿಂದ ತೊಡಗಿದಂತೆ ಜೂನ್ 16 ರ ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನೀಡಿತ್ತು. ಹಾಗೆಯೇ ವಿದ್ಯಾರ್ಥಿಗಳು, ಪೋಷಕರ ಜೊತೆಗೂ ಮಾತುಕತೆ ನಡೆಸಲಾಗಿತ್ತು. ಜೊತೆಗೆ, ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಈ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ಜೆಇಇ, ನೀಟ್ ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಈ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳ ಬಗ್ಗೆ ಗಮನಹರಿಸುವಂತೆ ಸಚಿವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.