ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ನಿರಂತರ ಪ್ರತಿಭಟನೆಯ ಬಗ್ಗೆ ಆರಂಭದಲ್ಲಿ ಕಳವಳ ವ್ಯಕ್ತಪಡಿಸಿ ದೊಡ್ಡ ಸುದ್ದಿ ಮಾಡಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ರೈತರ ಸಮಸ್ಯೆಗಳನ್ನು ಎದುರಿಸಲು ಸಂವಾದದ ಹಾದಿಯನ್ನು ಆಯ್ಕೆ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನವನ್ನು ಈಗ ಶ್ಲಾಘಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಟ್ರೂಡೊ ಅವರು, ರೈತರನ್ನು ಮಾತುಕತೆಗಳಲ್ಲಿ ತೊಡಗಿಸಿಕೊಳ್ಳಲು ಭಾರತ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದರು ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸೂಕ್ತವಾಗಿದುದು ಎಂದು ವಿವರಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಡರಾತ್ರಿ ತಿಳಿಸಿದೆ.
ಪ್ರಧಾನಿ ಮೋದಿ ಮತ್ತು ಟ್ರುಡೊ ಇಬ್ಬರೂ ಬುಧವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ, ಕೊರೋನಾವೈರಸ್ ಬಿಕ್ಕಟ್ಟು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ.
“ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಟ್ರುಡೋ ಅವರು ಪ್ರಜಾಪ್ರಭುತ್ವಕ್ಕೆ ಸೂಕ್ತವಾದ ಸಂವಾದದ ಹಾದಿಯನ್ನು ಆಯ್ಕೆ ಮಾಡಿದ ಭಾರತ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
“ಟ್ರೂಡೊ ಕೆನಡಾದ ಭಾರತೀಯ ರಾಜತಾಂತ್ರಿಕ ಆವರಣ ಮತ್ತು ಸಿಬ್ಬಂದಿಗೆ ರಕ್ಷಣೆ ನೀಡುವಲ್ಲಿ ತಮ್ಮ ಸರ್ಕಾರದ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದಾರೆ” ಎಂದು ಶ್ರೀವಾಸ್ತವ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.