ಬೆಂಗಳೂರು: ಕಾರ್ಯನಿರತ ಪತ್ರಕರ್ತರು ಅನಾರೋಗ್ಯ ಅಥವಾ ಇನ್ಯಾವುದೋ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 5 ಲಕ್ಷ ಪರಿಹಾರ ಧನ ನೀಡುವುದನ್ನು ಮುಂದುವರಿಸುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ತಂಡ ಮುಖ್ಯಮಂತ್ರಿ ಬಿ ಎಸ್ ವೈ ಅವರಿಗೆ, ಈ ಬಾರಿಯ ಬಜೆಟ್ ನಲ್ಲಿ ಪತ್ರಕರ್ತರಿಗೆ ಸಂಬಂಧಿಸಿದಂತೆಯೂ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ್ದರು.
ಹಾಗೆಯೇ, ವಿಜಯಪುರ ವಿವಿಯಲ್ಲಿ ಪತ್ರಕರ್ತ ಮೊಹರೆ ಹಣಮಂತರಾಯ, ಬೆಂಗಳೂರು ವಿವಿಯ ಎಚ್ ಎಸ್ ದೊರೆಸ್ವಾಮಿ, ಧಾರವಾಡ ವಿವಿಯಲ್ಲಿ ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಪತ್ರಿಕೋದ್ಯಮ ವಿಭಾಗಗಳಲ್ಲಿ ಅಧ್ಯಯನ ಪೀಠಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆಯೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಇವೆಲ್ಲಕ್ಕೂ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.