ಹುಬ್ಬಳ್ಳಿ: ರಾಜ್ಯದಲ್ಲಿ ಹೂಡಿಕೆ ಮಾಡಲು ಒಲವು ತೋರುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪರವಾನಗಿ ಪಡೆಯಲು ಸಲ್ಲಿಸಲಾದ ಅರ್ಜಿಗಳನ್ನು ಆಯಾಯ ತಿಂಗಳಲ್ಲಿಯೇ ಪರಿಶೀಲನೆ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಎರಡು ತಿಂಗಳಿಗೊಮ್ಮೆ ಅತ್ಜಿಗಳ ಪರಿಶೀಲನೆ ನಡೆಸಲಾಗುತ್ತಿತ್ತು. ಆದರೆ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಲ್ಲಿಯೂ ಪರಿಶೀಲನೆ ನಡೆಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಧಾರವಾಡ, ಶಿವಮೊಗ್ಗ, ಕಲ್ಬುರ್ಗಿ ಜಿಲ್ಲೆಗಳು ಮತ್ತು ಅವುಗಳ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷ ಹೂಡಿಕೆ ವಲಯಗಳನ್ನು ಗುರುತು ಮಾಡಲಾಗುವುದು. ಇದಕ್ಕಾಗಿ ಮಸೂದೆ ಸಿದ್ಧಪಡಿಸಲಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.