ನವದೆಹಲಿ: ಬಿಜೆಪಿಯ ‘ವಿಜಯ ಯಾತ್ರೆ’ ಫೆಬ್ರವರಿ 21 ರಂದು ಕೇರಳದ ಕಾಸರಗೋಡ್ನಿಂದ ಪ್ರಾರಂಭವಾಗಲಿದ್ದು, ಮಾರ್ಚ್ ಮೊದಲ ವಾರದಲ್ಲಿ ತಿರುವನಂತಪುರದಲ್ಲಿ ಮುಕ್ತಾಯಗೊಳ್ಳಲಿದೆ.
ಚುನಾವಣೆಗೂ ಮುಂಚಿತವಾಗಿ ಕೇರಳದಲ್ಲಿ ವಿಜಯ ಯಾತ್ರೆ ಆರಂಭಿಸುವ ಮೂಲಕ ಈ ಪ್ರದೇಶದಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಬಿಜೆಪಿ ಸಜ್ಜಾಗಿದೆ. ಬಿಜೆಪಿಯ ‘ವಿಜಯ ಯಾತ್ರೆ’ ಫೆಬ್ರವರಿ 21 ರಂದು ಕಾಸರಗೋಡಿನಿಂದ ಪ್ರಾರಂಭವಾಗಲಿದ್ದು, ಮಾರ್ಚ್ ಮೊದಲ ವಾರದಲ್ಲಿ ತಿರುವನಂತಪುರಂನಲ್ಲಿ ಮುಕ್ತಾಯಗೊಳ್ಳಲಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕೇಸರಿ ಪಕ್ಷದ ‘ವಿಜಯ ಯಾತ್ರೆ’ಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಹಲವಾರು ಸಂಪುಟ ಸಚಿವರು ಮತ್ತು ಬಿಜೆಪಿಯ ಉನ್ನತ ಅಧಿಕಾರಿಗಳು ಈ ವೇಳೆ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಕೇರಳಕ್ಕೆ ಭೇಟಿ ನೀಡಿ ಹಲವು ಯೊಜನೆಗಳಿಗೆ ಚಾಲನೆಯನ್ನು ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಚುನಾವಣಾ ಕಣ ಕೇರಳಕ್ಕೆ ಭೇಟಿ ನೀಡಿದ್ದರು, ಅಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಸಾಂಸ್ಥಿಕ ಚಟುವಟಿಕೆಗಳನ್ನು ಪರಿಶೀಲಿಸಿದರು.
ಕೇರಳದ 140 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ನಲ್ಲಿ ಚುನಾವಣೆ ನಡೆಯಲಿದೆ. 2016 ರ ಚುನಾವಣೆಯಲ್ಲಿ ಪಕ್ಷವು ಕೇವಲ 1 ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು, ಈ ಬಾರಿ ಸ್ಥಾನವನ್ನು ಹೆಚ್ಚಿಸುವ ಉತ್ಸಾಹದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.