ವಿಜಯಪುರ: ನಗರದ ಮದಭಾವಿ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.
ವಿಜಯಪುರ ಜಿಲ್ಲೆಯು ಐತಿಹಾಸಿಕವಾಗಿಯೂ ಮಹತ್ವ ಪಡೆದಿದೆ. ಜೊತೆಗೆ ಧಾರ್ಮಿಕ ಹಿನ್ನೆಲೆ, ಪ್ರವಾಸೋದ್ಯಮಗಳಿಗೆ ಸಂಬಂಧಿಸಿದಂತೆಯೂ ಪ್ರಾಮುಖ್ಯತೆ ಪಡೆದಿದೆ. ತೋಟಗಾರಿಕಾ ಬೆಳೆಗೂ ಪ್ರಸಿದ್ಧಿ ಪಡೆದಿರುವ ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವುದು ಉದ್ಯೋಗ ಸೃಷ್ಟಿ ಹೆಚ್ಚಿಸುವುದಕ್ಕೂ ಕಾರಣವಾಗಲಿದೆ. ಜೊತೆಗೆ ತೋಟಗಾರಿಕಾ ಬೆಳೆಗಳ ಸಾಗಾಟಕ್ಕೂ ಇದು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಮದಭಾವಿಯ 727 ಎಕರೆಯಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಒಟ್ಟು 220 ಕೋಟಿ ರೂ. ವೆಚ್ಚದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 95 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು, ಕಾಮಗಾರಿ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.