ಬೆಂಗಳೂರು: ಕೊರೋನಾ ಬಳಿಕ ಇದೀಗ ಮತ್ತೆ ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಆಹಾರ ಧಾನ್ಯ ವಿತರಿಸುವುದಕ್ಕೂ ಪೂರಕ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ವಿರತಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಬದಲಿಗೆ 1 – 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಪ್ರಸ್ತುತ 132 ದಿನಗಳಿಗೆ ಅಗತ್ಯವಿರುವಷ್ಟು ಧಾನ್ಯಗಳನ್ನು ಖರೀದಿ ಮಾಡಿ, ಅದನ್ನು ಸರಬರಾಜು ಮಾಡುವ, ವಿದ್ಯಾರ್ಥಿಗಳಿಗೆ ವಿತರಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.
ಈ ಸಂಬಂಧ ಮಾತನಾಡಿರುವ ಮಧ್ಯಾಹ್ನ ಉಪಹಾರ ಯೋಜನೆಯ ಜಂಟಿ ನಿರ್ದೇಶಕ ಟಿ. ನಾರಾಯಣ ಗೌಡ, 108 ದಿನಗಳಿಗೆ ಅಗತ್ಯವಿರುವ ಧಾನ್ಯಗಳನ್ನು ಕೆಎಫ್ಸಿಎಸ್ಸಿ ಗೋದಾಮುಗಳಲ್ಲಿ ಸಂಗ್ರಹಿಸಿಡಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಎರಡು ಹಂತಗಳಲ್ಲಿ ವಿತರಣೆಗೆ ಈ ಹಿಂದೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಜೂನ್, ಜುಲೈನ ಆಹಾರ ಧಾನ್ಯಗಳ ವಿತರಣೆಯನ್ನು ಮಾಡಲಾಗಿತ್ತು. ಉಳಿದ 55 ದಿನಗಳ ಆಹಾರ ಧಾನ್ಯ ವಿತರಣೆ ಪ್ರಗತಿಯಲ್ಲಿದೆ. 2020 ರ ನವೆಂಬರ್ನಿಂದ 2021 ರ ಎಪ್ರಿಲ್ ವರೆಗಿನ ಅಹಾರ ವಿತರಣೆಗೆ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.