ಬೆಂಗಳೂರು: ಆತ್ಮನಿರ್ಭರ ಭಾರತ ನಿರ್ಮಾಣ ಕಲ್ಪನೆಯಡಿಯಲ್ಲಿ ಸ್ವದೇಶೀ ನಿರ್ಮಿತ ಆಟಿಕೆಗಳ ತಯಾರಿಕೆಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಒತ್ತು ನೀಡಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕರ್ನಾಟಕದಲ್ಲಿ ಬೊಂಬೆಗಳ ವಿಚಾರದಲ್ಲಿಯೇ ಪ್ರಖ್ಯಾತಿ ಪಡೆದಿರುವ ಚನ್ನಪಟ್ಟಣದ ರೈಲು ನಿಲ್ದಾಣದಲ್ಲಿ ಪ್ರಸಿದ್ಧ ʼಚನ್ನಪಟ್ಟಣದ ಬೊಂಬೆʼಗಳನ್ನು ಮತ್ತು ಕರಕುಶಲ ವಸ್ತುಗಳನ್ನು ಪ್ರದರ್ಶನಕ್ಕಿರಿಸಲಾಗಿದೆ.
ಸ್ಥಳೀಯ ಆಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಇಂತಹ ಕ್ರಮವನ್ನು ಅಳವಡಿಸಿಕೊಂಡಿರುವ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ಚಿತ್ರಗಳ ಸಹಿತ ಟ್ವೀಟ್ ಮಾಡಿದ್ದಾರೆ. ʼಕರ್ನಾಟಕದ ಚನ್ನಪಟ್ಟಣ ರೈಲು ನಿಲ್ದಾಣದಲ್ಲಿ ಆತ್ಮನಿರ್ಭರ ಭಾರತ ಕಲ್ಪನೆಗೆ ಪೂರಕ ಎಂಬಂತೆ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ಆ ಮೂಲಕ ಸ್ಥಳೀಯ ಆಟಿಕೆ ಉದ್ಯಮಗಳಿಗೆ ಉತ್ತೇಜನ ನೀಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಅವರು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Towards an Aatmanirbhar Bharat: Railways displays indigenous toys and handicrafts at Channapatna Station in Karnataka.
This will promote the local toy manufacturing cluster. pic.twitter.com/eRAkX4nKz3
— Piyush Goyal (@PiyushGoyal) February 15, 2021
ಪ್ರಧಾನಿ ನರೇಂದ್ರ ಮೋದಿ ಅವರು ಪೀಯುಷ್ ಗೋಯಲ್ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದು, ಭಾರತದ ಪ್ರತಿಭೆ, ಸಂಸ್ಕೃತಿ ಮತ್ತು ಆಟಿಕೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಉತ್ತಮ ನಡೆ ಎಂದು ಪ್ರಶಂಸಿಸಿದ್ದಾರೆ.
Good initiative to showcase India’s talent, traditions and toys. https://t.co/2V9dC83HkL
— Narendra Modi (@narendramodi) February 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.