ಚಿಕ್ಕಮಗಳೂರು: ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವೇ?, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ದಿಶಾ ರವಿ ಬಂಧನವಾಗಿಲ್ಲ. ಬದಲಾಗಿ, ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಿರುವುದಕ್ಕಾಗಿ ಆಕೆಯನ್ನು ಬಂಧಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.
ದಿಶಾ ರವಿಯನ್ನು ವೈಭವೀಕರಿಸಿ ಮಾತನಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇಂತಹ ಆರೋಪಿಗಳಿಗೆ ಬೆಂಬಲ ನೀಡುವ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರಿಗೆ ನಾಚಿಕೆಯಾಗಬೇಕು ಎಂದು ಸಿ. ಟಿ. ರವಿ ತಿಳಿಸಿದ್ದಾರೆ. ಆಕೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿಯಲ್ಲಿ ಆಕೆ ಅರಾಜಕತೆ ಸೃಷ್ಟಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದು, ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ದೇಶಕ್ಕೆ ಸಂವಿಧಾನ ದೊಡ್ಡದು. ಭಾರತದ ಅಖಂಡತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಅದನ್ನು ನಾಶಪಡಿಸಲು ಪ್ರಯತ್ನ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂತಹ ತಪ್ಪಿತಸ್ಥರನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ತನ್ನ ನಾಯಕರನ್ನು ಕಳೆದುಕೊಳ್ಳುತ್ತಿದೆ. ಅಖಂಡತೆಯನ್ನು ನಾಶಗೊಳಿಸುವ ಯಾವುದೇ ಶಕ್ತಿಗಳನ್ನು ನಾವು ಬೆಂಬಲಿಸಬಾರದು ಎಂದು ಸಿ. ಟಿ. ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಮ ಮಂದಿರ ನಿಧಿ ಸಮರ್ಪಣೆ ಮತ್ತು ಆರ್ಎಸ್ಎಸ್ ಬಗ್ಗೆ ಖಂಡನಾರ್ಹ ಹೇಳಿಕೆ ನೀಡಿರುವ ಎಚ್ ಡಿ ಕುಮಾರಸ್ವಾಮಿ ಬಗೆಗೂ ಮಾತನಾಡಿರುವ ಸಿ. ಟಿ. ರವಿ, ಮನಸ್ಸಿಗೆ ಮೊಳೆ ಹೊಡೆಯುವ ಕೆಲಸ ಮಾಡುವುದು ಎಚ್ ಡಿ ಕೆ ಅವರಿಗೆ ಶೋಭೆ ತರುವುದಿಲ್ಲ. ಇಂತಹ ಸುಳ್ಳುಗಳನ್ನು ಬಿತ್ತುವ ಕೆಲಸ ಖಂಡನೀಯ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.