ಬೆಂಗಳೂರು: ಮೀಸಲಾತಿಗೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದಷ್ಟೇ ಆದೇಶಿಸಿದ್ದರು. ಇದೀಗ ಮೀಸಲಾತಿ ನೀಡುವಂತೆ ಮನವಿ ಮಾಡಿರುವ ಪಂಚಮಸಾಲಿ ಸಮುದಾಯದ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೂಚಿಸಿದೆ.
ರಾಜ್ಯದ ಲಿಂಗಾಯುತ ಪಂಚಮಸಾಲಿ ಸಮುದಾಯವು ತಮ್ಮನ್ನು ʼಪ್ರವರ್ಗ 2 ಎʼ ಗೆ ಸೇರ್ಪಡೆ ಮಾಡುವಂತೆ ಮನವಿ ಸಲ್ಲಿಸಿದೆ. ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದು ಈ ಹಿನ್ನೆಲೆಯಲ್ಲಿ ತಮಗೆ ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಮನವಿಯಲ್ಲಿ ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡುವಂತೆ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ಹಿಂದುಳಿದ ವರ್ಗಗಳ ಆಯೋಗಕ್ಕೆ ಆದೇಶ ನೀಡಿದ್ದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ 1995 ಅಡಿಯಲ್ಲಿ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಮೃತಿಗಳ ಬಗ್ಗೆ ಸಮೀಕ್ಷೆ ನಡೆಸುವುದು, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತು ಮಾಡುವಂತೆಯೂ ಸೂಚಿಸಲಾಗಿತ್ತು. ಹಾಗೆಯೇ ಅಂತಹ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಪೂರಕವಾದ ಶಿಫಾರಸ್ಸು ಮಾಡುವ ಕೆಲಸವನ್ನು ರಾಜ್ಯದ ಹಿಂದುಳಿದ ವರ್ಗಗಳ ಆಯೋಗಕ್ಕೆ ವಹಿಸಲಾಗಿದೆ. ಅದರನ್ವಯ ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.