ಬೆಂಗಳೂರು: ಕೊರೋನಾ ಸೋಂಕಿನ ಹಾವಳಿ ರಾಜ್ಯದಲ್ಲಿ ಮತ್ತೆ ಹೆಚ್ಚಾಗುವ ಲಕ್ಷಣ ಎಂಬಂತೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೊಳಕ್ಕೆ ಪ್ರವೇಶಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಕೊರೋನಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಸಮೀಪದ ರಾಜ್ಯ ಕೇರಳದಲ್ಲಿ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕ – ಕೇರಳ ಗಡಿ ಭಾಗಗಳಲ್ಲಿಯೂ ಕೊರೋನಾ ಸೋಂಕಿತರ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯದೊಳಕ್ಕೆ ಪ್ರವೇಶಿಸುವ ಜನರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಎಂದು ಸರ್ಕಾರ ಹೇಳಿದೆ. ಹಾಗೆಯೇ ವಿದೇಶಗಳಲ್ಲಿಯೂ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ, ಬಂದರುಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ವಿದೇಶಗಳಿಂದ ಭಾರತಕ್ಕೆ ಆಗಮಿಸುವ ಜನರಿಗೂ ಕೊರೋನಾ ಪರೀಕ್ಷೆ ಕಡ್ಡಾಯ ಎಂದು ಸರ್ಕಾರ ಸೂಚಿಸಿದೆ.
ಕೇರಳದಿಂದ ರಾಜ್ಯದೊಳಕ್ಕೆ ಆಗಮಿಸುವವರು 72 ಗಂಟೆಗಳಿಗೂ ಮುನ್ನ ಕೊರೋನಾ ಪರೀಕ್ಷೆ ನಡೆಸಿದ ಆರ್ಟಿ-ಪಿಸಿಆರ್ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅಂತರಾಷ್ಟ್ರೀಯ ಪ್ರಯಾಣಿಕರು ಸಹ ಪ್ರಯಾಣಕ್ಕೂ ಮೊದಲು ತಮ್ಮ ಕೊರೋನಾ ಸೋಂಕು ಪರೀಕ್ಷೆಯ ಆರ್ಟಿ-ಪಿಸಿಆರ್ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.
ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ, ಕೇರಳ ರಾಜ್ಯದಲ್ಲಿ ಮಾತ್ರ ಇಂದಿಗೂ ದಿನಕ್ಕೆ 2000 ಗಳಷ್ಟು ಕೊರೋನಾ ಸಕ್ರಿಯ ಪ್ರಕರಣಗಳು ದಾಖಲಾಗುತ್ತಲೇ ಇದೆ. ಕರ್ನಾಟಕ ಮತ್ತು ಕೇರಳದ ಗಡಿ ಪ್ರದೇಶಗಳಲ್ಲಿಯೂ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದೊಳಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಮತ್ತು ಕೇರಳ ಪ್ರಯಾಣಿಕರಿಗೆ ಕೊರೋನಾ ಸೋಂಕು ಮಾದರಿ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.