ಶಿವಮೊಗ್ಗ: ರಾಜ್ಯದಲ್ಲಿ ಉತ್ತಮ ಉದ್ಯೋಗಗಳನ್ನು ಸೃಷ್ಟಿಸುವ ಕೆಲಸಗಳಿಗೆ ಪೂರಕವಾಗುವಂತೆ ರಾಜ್ಯ ಸರ್ಕಾರ ನೂತನ ಕೈಗಾರಿಕಾ ನೀತಿಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ನಗರದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಆಯೋಜನೆ ಮಾಡಲಾಗಿದ್ದ ʼಮಾಚೇನಹಳ್ಳಿ ಕೈಗಾರಿಕಾ ಸಂಘʼದ ರಜತ ಮಹೋತ್ಸವ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಬೆಂಗಳೂರು ಹೊರತಾದಂತೆ ರಾಜ್ಯದ ಇತರೆಡೆಗಳಲ್ಲಿಯೂ ಕೈಗಾರಿಕೆಗಳ ಆರಂಭಕ್ಕೆ ಪೂರಕವಾಗುವ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಅದಕ್ಕೆ ಅಗತ್ಯವಾದ ಮೂಲಸೌಕರ್ಯಗಳಾದ ರಸ್ತೆ ನಿರ್ಮಾಣ, ನೀರು ಪೂರೈಕೆ, ವಿದ್ಯುತ್ ಮೊದಲಾದವುಗಳನ್ನು ಕಲ್ಪಿಸುವುದಕ್ಕೂ ಅವಶ್ಯಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. ಆ ಮೂಲಕ ಕೈಗಾರಿಕೆಗಳನ್ನು ಆಕರ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಕೈಗಾರಿಕೆಗೆ ಸಂಬಂಧಿಸಿದಂತೆ ಹೂಡಿಕೆ ಮಾಡುವ ವಿಚಾರದಲ್ಲಿ ರಾಜ್ಯ ದೇಶದಲ್ಲಿ ಮುಂಚೂಣಿ ಕಾಯ್ದುಕೊಂಡಿದೆ. ರಾಜ್ಯದ ಐಟಿಐಗಳನ್ನು ಟಾಟಾ ಟೆಕ್ನಾಲಜಿ ಸಂಸ್ಥೆಯ ಸಹಯೋಗದ ಜೊತೆಗೆ ಸುಮಾರು 4636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ಹೆಚ್ಚು ಪರಿಣಾಮಾತ್ಮಕವಾಗಿ ನೀಡುವ ನೆಲೆಯಲ್ಲಿ ಈ ಚಿಂತನೆ ಪೂರಕವಾಗಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.