ಬೆಂಗಳೂರು: ರಾಜ್ಯದ ಉಗ್ರಾಣ ನಿಗಮದ ನೂತನ ಆಡಳಿತ ಕಚೇರಿ ಕಟ್ಟಡವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ 50 ವರ್ಷಗಳ ಹಳೆಯ ಕಟ್ಟಡವನ್ನು ಕೆಡವಿ ಸುಮಾರು 3.76 ಕೋಟಿ ರೂ. ವೆಚ್ಚದಲ್ಲಿ ಈ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕಚೇರಿಯ ಸಂಪೂರ್ಣ ಆಡಳಿತ ವಹಿವಾಟುಗಳು ಇಲ್ಲಿಂದಲೇ ನಡೆಯಲಿದೆ.
ಕೇಂದ್ರ ಸರ್ಕಾರದ 1962 ರ ಕಾಯ್ದೆಯಂತೆ ಎಲ್ಲಾ ರಾಜ್ಯಗಳಲ್ಲಿಯೂ ಉಗ್ರಾಣ ನಿಯಮಗಳಿರುತ್ತವೆ. ರಾಜ್ಯದ ಉಗ್ರಾಣ ನಿಗಮ ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ಅಧೀನ ಸಂಸ್ಥೆಯಾಗಿದೆ. ಕೇಂದ್ರ ಸರ್ಕಾರದ ಕೇಂದ್ರ ಉಗ್ರಾಣ ನಿಗಮ ಮತ್ತು ರಾಜ್ಯ ಸರ್ಕಾರ ಇದಕ್ಕಾಗಿ 50:50 ರಷ್ಟು ಶೇರು ಹೂಡಿಕೆ ಮಾಡಿರುತ್ತದೆ. ರಾಜ್ಯದಲ್ಲಿ ಮೊದಲ ಬಾರಿಗೆ ರಾಯಚೂರು, ಹುಬ್ಬಳ್ಳಿ, ಮೈಸೂರುಗಳಲ್ಲಿ ರಾಜ್ಯ ಉಗ್ರಾಣ ಕಾರ್ಯಾರಂಭ ಮಾಡಿತ್ತು. ಪ್ರಸ್ತುತ ನಿಗಮ 17.50 ಲಕ್ಷ ಮೆ. ಟನ್ಗಳ ಉಗ್ರಾಣ ಸಾಮರ್ಥ್ಯ ದೊಂದಿಗೆ 153 ಉಗ್ರಾಣ ಶಾಖೆಗಳನ್ನು ಮತ್ತು 1 ಪ್ರಾದೇಶಿಕ ಕಚೇರಿಯನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.