ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕೃಷಿ ಬೆಳೆಗಳ ಮೌಲ್ಯವರ್ಧನೆ, ಆಹಾರ ಉತ್ಪನ್ನಗಳ ಸಂಸ್ಕರಣೆಗೆ ಪೂರಕವಾಗುವಂತೆ ಫುಡ್ಪಾರ್ಕ್ ನಿರ್ಮಾಣಕ್ಕೆ ಅನುದಾನ ಒದಗಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗುವುದು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ಅವಧಿಯಲ್ಲಿ ಬಹುತೇಕ ಜನರು ನಗರಗಳಿಂದ ತಮ್ಮ ಹಳ್ಳಿಗಳತ್ತ ಮರಳಿದ್ದಾರೆ. ಕೃಷಿ ಕಾಯಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೃಷಿ ಆಧಾರಿತ ಉದ್ಯಮಗಳನ್ನು ಆರಂಭಿಸಿದ್ದಾರೆ. ಈ ಹಿನ್ನಲೆಯಲ್ಲಿ ಆಹಾರ ವಸ್ತುಗಳ ಸಂಸ್ಕರಣೆ ಮಾಡಿ, ಮೌಲ್ಯವರ್ಧನೆಗೆ ಅನುಕೂಲವಾಗುವಂತೆ ಜಿಲ್ಲೆಗೊಂದರಂತೆ ಫುಡ್ಪಾರ್ಕ್ ನಿರ್ಮಾಣ ಮಾಡುವಂತೆ ಸಿಎಂ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಆಹಾರ ಸಂಸ್ಕರಣೆಯ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂ. ಗಳನ್ನು ಮೀಸಲಿಟ್ಟಿದೆ. ಮೈಸೂರಿನ ಸಿಎಫ್ಟಿಆರ್ಐ ನಲ್ಲಿ ಪ್ರತಿ ಜಿಲ್ಲೆಯ ರೈತರಿಗೂ ಆಹಾರ ಸಂಸ್ಕರಣೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.