ಬೆಂಗಳೂರು: ರಾಜ್ಯದಲ್ಲಿ 6 – 8 ನೇ ತರಗತಿಗಳು ಫೆ. 22 ರಿಂದ ಆರಂಭವಾಗಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶವನ್ನು ಹೊರಡಿಸಿದೆ.
ಆದರೆ ಬೆಂಗಳೂರು ನಗರ ಮತ್ತು ಕೇರಳ ರಾಜ್ಯದ ಜೊತೆಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ನೇ ತರಗತಿಗೆ ಮಾತ್ರವೇ ಶಾಲಾರಂಭ ಮಾಡಲಾಗುವುದು. ಅದಕ್ಕಿಂತ ಕೆಳಗಿನ ತರಗತಿಗಳಿಗೆ ಶಾಲಾರಂಭವಿಲ್ಲ. ಬದಲಾಗಿ ವಿದ್ಯಾಗಮ ಯೋಜನೆಯನ್ನೇ ಮುಂದುವರಿಸಲಾಗುತ್ತದೆ ಎಂದು ಈ ಆದೇಶದಲ್ಲಿ ಶಿಕ್ಷಣ ಇಲಾಖೆ ತಿಳಿಸಿದೆ.
ಆರನೇ ತರಗತಿಯಿಂದ ಹನ್ನೆರಡನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಫೆ. 22 ರಿಂದ ದಿನ ಪೂರ್ತಿ ತರಗತಿಗಳು ಈ ಹಿಂದಿನಂತೆಯೇ ನಡೆಯಲಿವೆ. ಆರೋಗ್ಯ ಇಲಾಖೆಯ ವತಿಯಿಂದ ಶಾಲೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೊರೋನಾ ರ್ಯಾಂಡಮ್ ಪರೀಕ್ಷೆಗಳು ನಡೆಯಲಿವೆ. ಕೇರಳದ ಗಡಿಯಿಂದ ಶಾಲೆಗೆ ಬರುವ ವಿದ್ಯಾರ್ಥಿಗಳು ಕೊರೋನಾ ಮಾದರಿ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿ ಬಂದಲ್ಲಿ ಮಾತ್ರವೇ ಶಾಲೆಗೆ ಹಾಜರಾಗುವಂತೆ ಇಲಾಖೆ ಆದೇಶದಲ್ಲಿ ತಿಳಿಸಿದೆ. ತರಗತಿಗೆ ಹಾಜರಾಗಬೇಕೆಂಬ ನಿಯಮ ಕಡ್ಡಾಯವಲ್ಲ. ಮಧ್ಯಾಹ್ನದ ಊಟವನ್ನು ವಿದ್ಯಾರ್ಥಿಗಳು ಮನೆಯಿಂದಲೇ ತರುವಂತೆಯೂ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.