ಉಡುಪಿ: ಶೀಘ್ರದಲ್ಲೇ ರಾಜ್ಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.
ಅವರು ಶನಿವಾರ ಕಾರ್ಕಳದಲ್ಲಿ ನೂತನ ಪೊಲೀಸ್ ವಸತಿ ಸಮುಚ್ಛಯ ಕಟ್ಟಡ ಉದ್ಘಾಟಿಸಿ ಮಾತನಾಡಿ, ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಮಾರ್ಚ್ 31 ರ ಒಳಗಾಗಿ ಪೊಲೀಸ್ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದ್ದು, ಆ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳಲ್ಲಿ 7 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಸುಮಾರು 17 ಸಾವಿರ ಪೊಲೀಸ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಈ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದ್ದು, ಇದರಲ್ಲಿ ಯಾವುದೇ ರೀತಿಯ ಮಧ್ಯಸ್ಥಿಕೆ ನಡೆಯುವುದಿಲ್ಲ. ಪೊಲೀಸ್ ಇಲಾಖೆಗೆ ಬಲ ತುಂಬುವ ನಿಟ್ಟಿನಲ್ಲಿ ಅಗತ್ಯವೆನಿಸಿದ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ನುಡಿದಿದ್ದಾರೆ.
ಜೊತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕಟಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದನ್ನು ಮಟ್ಟಹಾಕುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಅವರು ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸುತ್ತಿರುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.