ಚಿಕ್ಕಬಳ್ಳಾಪುರ: ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟಗೊಂಡು ಸಾವು – ನೋವು ಸಂಭವಿಸಿದ ಘಟನೆಯ ಕರಾಳತೆ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿಯಲ್ಲಿ ಇಂದು ಜಿಲೆಟಿನ್ ಸ್ಫೋಟ ನಡೆದಿದ್ದು ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. (1/2)
— CM of Karnataka (@CMofKarnataka) February 23, 2021
ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರೂ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಈ ಘಟನೆಯಿಂದ ಅತೀವ ದುಃಖವಾಗಿದೆ. ಈ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಜೊತೆಗೆ ದುರಂತದಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.
Pained by the loss of lives due to a mishap at Chikkaballapur in Karnataka. Condolences to the bereaved families. Praying that the injured recover quickly: PM @narendramodi
— PMO India (@PMOIndia) February 23, 2021
ಈ ಸಂಬಂಧ ಹೇಳಿಕೆ ನೀಡಿರುವ ಸಚಿವ ಮುರುಗೇಶ್ ನಿರಾಣಿ, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೆಯೇ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಡಾ. ಕೆ. ಸುಧಾಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.