ಬೆಂಗಳೂರು: ಅಂತರ್ರಾಜ್ಯಗಳ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಕಾನೂನು ಹೋರಾಟ ಬಲಪಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ,
ಅಂತರ್ರಾಜ್ಯ ನದಿ ನೀರು ಹಂಚಿಕೆ ವಿವಾದದ ಸಂಬಂಧ ರಾಜ್ಯದ ಕಾನೂನು ತಂಡಗಳ ಜೊತೆಗೆ ಅವರು ಚರ್ಚೆ ನಡೆಸಿದ್ದಾರೆ.
ಕಾವೇರಿ, ಕೃಷ್ಣಾ ಮತ್ತು ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ನೀಡುವುದು ಬಾಕಿ ಇದೆ. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಹೋರಾಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾನೂನು ತಜ್ಞರ ಜೊತೆಗೆ ಮಾತುಕತೆ ನಡೆಸಿದ್ದಾರೆ. ರಾಜ್ಯದ ಶ್ರೇಯಸ್ಸಿಗಾಗಿ ಈಗಾಗಲೇ ಕಾನೂನು ತಜ್ಞರ ತಂಡಗಳು ಸಾಕಷ್ಟು ಶ್ರಮಿಸಿವೆ. ಕಾವೇರಿ ಜಲಾಯನ ಪ್ರದೇಶದಿಂದ ಹೆಚ್ಚುವರಿ ನೀರನ್ನು ತಮಿಳುನಾಡು ಬಳಕೆ ಮಾಡದಂತೆ ಮಾಡುವ ಹಿನ್ನೆಲೆಯಲ್ಲಿಯೂ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನೂ ಕಾನೂನು ತಂಡಗಳು ಸೂಚಿಸಿವೆ ಎಂದು ಸಚಿವರು ತಿಳಿಸಿದ್ದಾರೆ.
ನೆರೆಯ ತಮಿಳುನಾಡಿಗೆ ಕಾವೇರಿಯ 177.25 ಟಿಎಂಸಿ ನೀರು ಬಳಕೆ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಉಳಿದ ಪೂರ್ತಿ ಪ್ರಮಾಣದ ಕಾವೇರಿ ನೀರನ್ನು ಬಳಕೆ ಮಾಡಿಕೊಳ್ಳುವ ಪೂರ್ಣ ಅಧಿಕಾರವನ್ನು ಕರ್ನಾಟಕ ಹೊಂದಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೂ ಸಭೆ ನಡೆಸಲಾಗುತ್ತದೆ. ಈ ಬಗ್ಗೆ ರಾಜ್ಯದ ಜಲಸಂಪನ್ಮೂಲ ಇಲಾಖೆ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ರಾಜ್ಯದ ಎಲ್ಲಾ ಪಕ್ಷಗಳ ಮುಖಂಡರ ಜೊತೆಗೂ ಮಾತುಕತೆ ನಡೆಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.