ಬೆಂಗಳೂರು: ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹಳೆ ರನ್ ವೇ ಪುನರ್ ನಿರ್ಮಾಣದ ಕಾಮಗಾರಿ ಮಾರ್ಚ್ ಅಂತ್ಯದಲ್ಲಿ ಸಂಪೂರ್ಣವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಸದ್ಯ ರನ್ ವೇ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತಕ್ಕೆ ಬಂದು ತಲುಪಿದೆ. ಅಂತಿಮ ಹಂತದ ಕೆಲಸ ಕಾರ್ಯಗಳು ನಡೆಯುತ್ತಿವೆ. ಹಳೆಯ ರನ್ ವೇ ಕಾಮಗಾರಿ ಸಂಪೂರ್ಣವಾದ ಬಳಿಕ ಅದರಲ್ಲಿಯೂ ವಿಮಾನಗಳ ಸಂಚಾರ ಆರಂಭವಾಗಲಿದೆ. ಈ ಕಾಮಗಾರಿ ಯೋಜನೆಯನ್ನು ಸುಮಾರು 260 ಕೋಟಿ ರೂ. ವೆಚ್ಚದಲ್ಲಿ ಮುಂಬೈನ ಎಐಸಿ ಸಂಸ್ಥೆ ನಡೆಸುತ್ತಿದ್ದು, ನಿಗದಿತ ಅವಧಿಗಿಂತ ಮೊದಲೇ ಕಾಮಗಾರಿಯನ್ನು ಯಶಸ್ವಿಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಕಾಮಗಾರಿಯಲ್ಲಿ ನಾಲ್ಕು ಕಿ. ಮೀ. ಉದ್ದದ ರನ್ ವೇ ನಡುವೆ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಟ್ಯಾಕ್ಸಿ ವೇ, ಒಳಚರಂಡಿ, ಏರ್ಫೀಲ್ಡ್ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ವಿಮಾನ ಸಂಚಾರಕ್ಕೆ ಅಗತ್ಯ ಅನುಕೂಲಗಳನ್ನು ಕಲ್ಪಿಸಲಾಗಿದೆ. ಈ ರನ್ವೇ ಮೂಲಕ ವಾರ್ಷಿಕ 60 ರಿಂದ 75 ದಶಲಕ್ಷ ಪ್ರಯಾಣಿಕರನ್ನು ನಿಭಾಯಿಸಬಹುದಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ಇದು ಹೆಚ್ಚು ಲಾಭವನ್ನು ಒದಗಿಸಲಿದೆ. ಕೊರೋನಾ ಸಂದರ್ಭದಲ್ಲಿ ಪ್ರಾಧಿಕಾರಕ್ಕೆ ಅಪಾರ ಪ್ರಮಾಣದ ನಷ್ಟವಾಗಿದ್ದು, ಈ ನಷ್ಟವನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿಯೂ ಈ ಕ್ರಮ ಹೆಚ್ಚು ಪೂರಕವಾಗುವ ಸಾಧ್ಯತೆ ಇದೆ ಎಂದು ಡಿಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.