ನವದೆಹಲಿ: ಕೋವಿಡ್-19 ವಿರುದ್ಧದ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಖಾಸಗಿ ವಲಯವನ್ನು ದೊಡ್ಡ ಪ್ರಮಾಣದಲ್ಲಿ ಒಳಗೊಳ್ಳಲು ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ. ಕೆ. ಪಾಲ್ ಅವರ ಪ್ರಕಾರ, ಮುಂದಿನ ಹಂತದ ಕೋವಿಡ್ -19 ವ್ಯಾಕ್ಸಿನೇಷನ್ ವಿವರಗಳನ್ನು ಪ್ರಸ್ತುತ ದೃಡೀಕರಿಸಲಾಗುತ್ತಿದೆ ಮತ್ತು ಖಾಸಗಿ ವಲಯದ ಭಾಗವಹಿಸುವಿಕೆಯು ದೊಡ್ಡ ಪ್ರಮಾಣದಲ್ಲಿರುತ್ತದೆ. ಈಗಲೂ ಸಹ, ಖಾಸಗಿ ವಲಯವು ಪ್ರತಿದಿನ 10,000 ಸೆಷನ್ಗಳ ಪೈಕಿ 2,000 ವ್ಯಾಕ್ಸಿನೇಷನ್ ಸೆಷನ್ಗಳನ್ನು ನಡೆಸುತ್ತಿದೆ ಎಂದು ಅವರು ಒತ್ತಿ ಹೇಳಿದರು.
ರಾಷ್ಟ್ರವು ಹೆಚ್ಚು ಫಲಾನುಭವಿಗಳನ್ನು ಒಳಗೊಂಡ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ಕಾಲಿಡುತ್ತಿದ್ದಂತೆ, ಖಾಸಗಿ ವಲಯದ ತೊಡಗಿಸಿಕೊಳ್ಳುವಿಕೆಯು ಆಳವಾಗಿ ಮತ್ತು ವಿಸ್ತಾರವಾಗಿ ಇರಲಿದೆ ಎಂದು ಡಾ. ಪಾಲ್ ಹೇಳಿದ್ದಾರೆ.
ಸರ್ಕಾರ ಪ್ರತಿದಿನ 50,000 ಸೆಷನ್ಗಳನ್ನು ನಡೆಸುವ ಗುರಿ ಹೊಂದಿದೆ ಎಂದು ಹೇಳಲಾಗುತ್ತಿದೆ.
ಅಲ್ಲದೇ, ವ್ಯಾಕ್ಸಿನೇಷನ್ ಸೆಷನ್ಸ್ ಸ್ಥಳಗಳನ್ನು ಹೆಚ್ಚಿಸಲು ಸರ್ಕಾರವು ರಾಜ್ಯ ಸರ್ಕಾರಗಳನ್ನು ಕೇಳಿದೆ.
ಲಸಿಕೆಯ ಮೊದಲ ಡೋಸ್ನೊಂದಿಗೆ ಸರ್ಕಾರವು ಈಗಾಗಲೇ ಕ್ರಮವಾಗಿ ಶೇಕಡಾ 67 ನೋಂದಾಯಿತ ಆರೋಗ್ಯ ಮತ್ತು ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಿದೆ. ಸುಮಾರು 11.15 ಲಕ್ಷ ಆರೋಗ್ಯ ಕಾರ್ಯಕರ್ತರು ತಮ್ಮ ಎರಡನೇ ಡೋಸ್ ಅನ್ನು ಸ್ವೀಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.