ಬೆಂಗಳೂರು: ದೇಶದ ಪ್ರತಿ ಜಿಲ್ಲೆಯಲ್ಲೂ ಬಿಜೆಪಿ ಕಛೇರಿಗಳನ್ನು ಸ್ಥಾಪಿಸುವುದು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕ್ರಮಕೈಗೊಳ್ಳುವುದು. ದೀನಾ ದಯಾಳ್ಜೀ ಉಪಾಧ್ಯಾಯ ಅವರ ಜನ್ಮವರ್ಷಾಚರಣೆ ಹಿನ್ನಲೆಯಲ್ಲಿ ಬಡವರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಮುಂತಾದ ಹತ್ತು ಹಲವು ವಿಷಯಗಳಿಗೆ ಮಹತ್ವ ನೀಡಿದ್ದೇವೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದರು.
ರಾಷ್ಟ್ರೀಯ ಕಾರ್ಯಕಾರಿಣಿಯ ಕೊನೆಯ ದಿನವಾದ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ರಾಜಕೀಯ, ವಿದೇಶಾಂಗ ವ್ಯವಹಾರಗಳ ಬಗ್ಗೆಚರ್ಚೆ ನಡೆದಿದೆ. ಭೂಸ್ವಾಧೀನ ಮಸೂದೆಯ ಬಗ್ಗೆಯೂ ಚರ್ಚಿಸಿದ್ದೇವೆ. ವಿರೋಧ ಪಕ್ಷಗಳು ಇದರ ಬಗ್ಗೆ ಸುಳ್ಳು ಸುದ್ದಿಯನ್ನು ಹರಡುತ್ತಿವೆ. ಈ ಮಸೂದೆ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸಲು ಸಹಕಾರಿಯಾಗಲಿದೆ. ಇದು ರೈತ ವಿರೋಧಿಯಾಗಿಲ್ಲ’ ಎಂದರು.
‘ಗ್ರಾಮೀಣ ಮೂಲಭೂತ ಸೌಕರ್ಯ, ರಸ್ತೆ, ನೀರಾವರಿ, ವಿದ್ಯುದೀಕರಣ, ಬಡವರ ವಸತಿಯ ಬಗ್ಗೆ ಚರ್ಚೆಯಲ್ಲಿ ಬಹಳಷ್ಟು ಪ್ರಾಶಸ್ತ್ಯ ನೀಡಲಾಗಿದೆ. ಪಕ್ಷ ಮತ್ತು ಸರ್ಕಾರದ ನಡುವೆ ಅಸಮತೋಲನದ ಸಮಸ್ಯೆ ನಮಗೆ ಎದುರಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.
ದೆಹಲಿಯಲ್ಲೀ ಸೋತರೂ, ಇತೆರೆಡೆ ನಾವು ಗೆದ್ದಿದ್ದೇವೆ. ಮುಂದಿನ ಚುನಾವಣೆಯ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ. ಸರ್ಕಾರ ಬದಲಾವಣೆಗೆ ಇರುವ ಪ್ರಮುಖ ಸಾಧನ. ಅಂತೆಯೇ ಪಕ್ಷ ಕೂಡ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಎರಡು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಇಂದಿಗೆ ಮುಕ್ತಾಯಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.