ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಾದ ಕೇರಳ, ಮಹಾರಾಷ್ಟ್ರಗಳಿಂದ ರಾಜ್ಯದೊಳಕ್ಕಾಗಮಿಸುವ ಜನರು ಕೊರೋನಾ ನೆಗೆಟಿವ್ (ಆರ್ಟಿ-ಪಿಸಿಆರ್) ವರದಿ ಹೊಂದಿದ್ದರಷ್ಟೇ ಪ್ರವೇಶಿಸಬಹುದು ಎಂದು ತಿಳಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ನೆರೆ ರಾಜ್ಯದ ಜನರಿಗೆ ಪ್ರವೇಶಿಸುವುದಕ್ಕೆ ಯಾವುದೇ ನಿರ್ಬಂಧಗಳನ್ನು ಹೇರಿಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ಕರ್ನಾಟಕ ಮತ್ತು ಕೇರಳ ನಡುವೆ ಅಂತರರಾಜ್ಯ ಪ್ರಯಾಣವನ್ನು ನಿಷೇಧ ಮಾಡಲಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಮತ್ತು ಕೇರಳ ನಡುವೆ ಅಂತರರಾಜ್ಯ ಪ್ರಯಾಣವನ್ನು ನಿಷೇಧ ಮಾಡಲಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ-ಪಿಸಿರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಮಾರ್ಗಸೂಚಿ ಜಾರಿ ಮಾಡಲಾಗಿದೆ. @CMofKarnataka pic.twitter.com/JLeAVtCDyM
— Dr Sudhakar K (@DrSudhakar_) February 23, 2021
ನೆರೆ ರಾಜ್ಯಗಳಲ್ಲಿ ಕೊರೋನಾ ವ್ಯಾಪಿಸುತ್ತಿರುವ ತೀವ್ರತೆ ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ನಿಯಮವನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸದಂತೆ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಕೇರಳದ ಹೋಂಸ್ಟೇಗಳು, ರೆಸಾರ್ಟ್ಗಳು, ಹಾಸ್ಟೆಲ್, ಹೊಟೇಲ್ ಮೊದಲಾದ ಕಡೆಗಳಿಂದ ಆಗಮಿಸುತ್ತಿರುವವರು ಕಡ್ಡಾಯವಾಗಿ ಕೊರೋನಾ ನೆಗೆಟಿವ್ ವರದಿಯನ್ನು ಹೊಂದಿರುವಂತೆಯೂ ಸಚಿವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.