ಮಂಗಳೂರು: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿವೆ. ಈ ವಿಚಾರವನ್ನು ಕೂಲಂಕುಷವಾಗಿ ಪರಿಶೀಲಿಸಿ, ವೈಜ್ಞಾನಿಕ ಮತ್ತು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ.
ಶೇ. 50 ಕ್ಕಿಂತ ಹೆಚ್ಚು ಮೀಸಲಾತಿ ಇರಬಾರದು ಎಂಬುದಾಗಿ ಸಂವಿಧಾನ ಹೇಳಿದೆ. ಈ ಪರಿಮಿತಿಯಲ್ಲಿ ಅರ್ಹ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕೊರೋನಾ ಬಗ್ಗೆಯೂ ಮಾತನಾಡಿರುವ ಸಚಿವರು ನೆರೆಯ ಕೇರಳ, ಮಹಾರಾಷ್ಟ್ರದಿಂದ ರಾಜ್ಯದೊಳಕ್ಕೆ ಆಗಮಿಸುವವರಿಗೆ ಪ್ರವೇಶ ನಿರ್ಬಂಧಿಸಿಲ್ಲ. ಬದಲಾಗಿ ರಾಜ್ಯದಲ್ಲಿ ಎರಡನೇ ಹಂತದ ಕೊರೋನಾ ಅಲೆ ಹರಡದಿರಲು ಮುನ್ನೆಚ್ಚರಿಕೆಯಾಗಿ ರಾಜ್ಯದೊಳಕ್ಕೆ ಪ್ರವೇಶಿಸುವವರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ನಡೆಸಿ, ನೆಗೆಟಿವ್ ವರದಿ, ಆರ್ಟಿ – ಪಿಸಿಆರ್ ವರದಿಯನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಜೊತೆಗೆ ಆರೋಗ್ಯ ಸೇತು ಆ್ಯಪ್ ಮೂಲಕವೂ ಕೊರೋನಾ ಸೋಂಕಿತರನ್ನು ಟ್ರೇಸ್ ಮಾಡುವ ವ್ಯವಸ್ಥೆ ಮಾಡಬೇಕು. ಈ ಸಂಬಂಧ ರಾಜ್ಯದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಜೊತೆಗೂ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.