ಬೆಂಗಳೂರು: ಕಾಡು ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಒದಗಿಸುವ ಮತ್ತು ಅರಣ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚೆಚ್ಚು ಹಣ್ಣಿನ ಗಿಡಗಳನ್ನು ಬೆಳೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ನಡೆದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಪ್ರಾದೇಶಿಕ ವನ್ಯಜೀವಿ / ವಿಭಾಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅರಣ್ಯಗಳ ಅಭಿವೃದ್ಧಿಗೆ ಅರಣ್ಯವಾಸಿಗಳ ಮತ್ತು ರೈತರ ಸಹಕಾರ ಅತ್ಯಗತ್ಯ. ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಲ್ಲಿ ಈ ಗುರಿಯನ್ನು ಸಾಧಿಸುವುದು ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಹಸಿರು ವಲಯ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ನೆರವನ್ನು ಒದಗಿಸಲಿದೆ ಎಂದು ಅವರು ತಿಳಿಸಿದರು. ಅರಣ್ಯ ಅಭಿವೃದ್ಧಿಗೆ ಬೇಕಾದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಜೊತೆಗೆ ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ಉಂಟಾಗದಂತೆ ಎಚ್ಚರ ವಹಿಸುವ ದೃಷ್ಟಿಯಿಂದಲೂ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.