ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಎರಡು ವರ್ಷಗಳಾದ ಹಿನ್ನೆಲೆಯಲ್ಲಿ, ಆಧಾರ್ ಕಾರ್ಡ್ ಜೋಡಣೆ ಆಧಾರಿತ ಪಾವತಿಯಲ್ಲಿ 97% ರಷ್ಟು ಸಾಧನೆ ಮಾಡಿ ಪ್ರಥಮ ಸ್ಥಾನ ಕರ್ನಾಟಕ ಸರ್ಕಾರಕ್ಕೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್ ಅವರಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.
2019 ರ ಫೆ. 24 ರಂದು ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಬಡ ರೈತರ ಖಾತೆಗೆ ವಾರ್ಷಿಕ 6000 ರೂ. ಗಳನ್ನು ಮೂರು ಕಂತುಗಳಲ್ಲಿ ಜಮೆ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.