ಚಿಕ್ಕಬಳ್ಳಾಪುರ: ನಗರದ ಪ್ರಸಿದ್ಧ ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ನಂದಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಂದಿ ಬೆಟ್ಟ ಕಣ್ಮನ ಸೆಳೆಯುವಂತಹ ಪ್ರದೇಶವಾಗಿದ್ದು, ದಿನನಿತ್ಯ ಇಲ್ಲಿಗೆ ಸಾವಿರಾರು ಪ್ರವಾಸಿಗರು ಆಗಮಿಸಿ ಪ್ರಕೃತಿಯ ಸೌಂದರ್ಯ ಸವಿಯುತ್ತಾರೆ. ಈ ಪ್ರದೇಶಕ್ಕೆ ಐತಿಹಾಸಿಕ, ಧಾರ್ಮಿಕ ಮಹತ್ವವೂ ಇದ್ದು, ಇಲ್ಲಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 10 ಕೋಟಿ ರೂ. ಅನುದಾನವನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಇಲ್ಲಿಗೆ ರೋಪ್ವೇ ಬೇಕು ಎಂದು ಕಳೆದ ಕೆಲ ವರ್ಷಗಳಿಂದ ಸಾರ್ವಜನಿಕ ವಲಯದಿಂದ ಬೇಡಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿಯೂ ಚಿಂತನೆ ನಡೆಸಲಾಗುವುದು. ಜೊತೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು 10 ಎಕರೆಗಳಷ್ಟು ಜಾಗವನ್ನು ಪಡೆಯುವುದಕ್ಕೂ ಸರ್ಕಾರ ಪ್ರಯತ್ನ ನಡೆಸಿದೆ. ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡು ಈ ಕಾಮಗಾರಿಯನ್ನು 3 – 4 ತಿಂಗಳುಗಳಲ್ಲಿಯೇ ಮುಗಿಸಲು ಕ್ರಮ ಕೈಗೊಳ್ಳಲಾಗುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ ನಂದಿ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.