ಬೆಂಗಳೂರು: ರಾಜ್ಯದಲ್ಲಿ ಸಕಾಲ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ವಿಕಾಸ ಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಕಾಲ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಣೆ ಮಾಡಿದ ಜಿಲ್ಲೆಗಳಿಗೆ ಪ್ರಶಸ್ತಿ ಘೋಷಣೆ ಮಾಡಿದರು.
ಜನವರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ, ಚಿಕ್ಕಬಳ್ಳಾಪುರ ಎರಡನೇ ಸ್ಥಾನ ಮತ್ತು ಶಿವಮೊಗ್ಗ ಮೂರನೇ ಸ್ಥಾನವನ್ನು ಪಡೆದಿದೆ. ತಾಲೂಕುಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ತಾಲೂಕು ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಇದೇ ವೇಳೆ ನವೆಂಬರ್ ತಿಂಗಳಿನಲ್ಲಿ ಮೊದಲ ಸ್ಥಾನ ಗಳಿಸಿದ್ದ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಬೃಹತ್ ಗಡಿಯಾರವನ್ನು ಬಹುಮಾನವಾಗಿ ನೀಡಿ ಗೌರವಿಸಲಾಯಿತು.
ಬಳಿಕ ಮಾತನಾಡಿದ ಸಚಿವರು, ಇನ್ನು ಮುಂದೆ ಪ್ರತಿ ಜಿಲ್ಲೆಗಳಲ್ಲಿಯೂ ಸಕಾಲ ಸಪ್ತಾಹ ಕಡ್ಡಾಯ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಪ್ರತಿ ವಾರವೂ ಅಪರ ಜಿಲ್ಲಾಧಿಕಾರಿಗಳು ಸಕಾಲ ವಿವರಗಳನ್ನು ಪರಿಶೀಲನೆ ಮಾಡುವಂತೆಯೂ ಸೂಚಿಸಿದರು. ಎಲ್ಲಾ ಇಲಾಖೆಗಳ ಮುಂದೆಯೂ ಸಕಾಲ ಫಲಕ ದೊಡ್ಡದಾಗಿ ಹಾಕುವಂತೆಯೂ ಅವರು ಸೂಚನೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.