ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಹೊಡೆತಕ್ಕೊಳಗಾಗಿರುವ ರಾಜ್ಯದ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿ ನಾಳೆಯಿಂದ ಕಾರ್ಗೊ, ಪಾರ್ಸೆಲ್, ಹಗುರ ಪಾರ್ಸೆಲ್ಗಳ ಸೇವೆಯನ್ನು ಆರಂಭ ಮಾಡಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಸವದಿ ತಿಳಿಸಿದ್ದಾರೆ.
ಈ ಪಾರ್ಸೆಲ್ ವ್ಯವಸ್ಥೆಯನ್ನು ಜಾರಿಗೆ ತರುವುದರಿಂದಾಗಿ ಸಾರಿಗೆ ಸಂಸ್ಥೆಗೆ ವಾರ್ಷಿಕ 80 ರಿಂದ 100 ಕೋಟಿ ರೂ. ಗಳ ವರೆಗೆ ಆದಾಯ ದೊರೆಯುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ರಾಜ್ಯದ 88 ಬಸ್ ನಿಲ್ದಾಣಗಳಲ್ಲಿ, ಅಂತರಾಜ್ಯದ 21 ಬಸ್ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಎರಡನೇ ಹಂತದಲ್ಲಿ ಈ ಯೋಜನೆಯನ್ನು ರಾಜ್ಯದ ಎಲ್ಲಾ ಬಸ್ಸು ನಿಲ್ದಾಣಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಲಗೇಜ್ ಸಾಗಾಣಿಕೆ ಮಾಡುವುದರಿಂದ ಸಾರಿಗೆಯ ಎಲ್ಲಾ ವಿಭಾಗಗಳೂ ಪ್ರತಿ ನಿತ್ಯ 8.50 ಲಕ್ಷ ರೂ. ಆದಾಯ ಗಳಿಸುವ ಸಾಧ್ಯತೆ ಇದೆ. ನೂತನ ವ್ಯವಸ್ಥೆ ಜಾರಿಯಾದಲ್ಲಿ ಈ ಆದಾಯ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅವರು ನುಡಿದಿದ್ದಾರೆ. ಇದರ ಸಮರ್ಥ ಅನುಷ್ಠಾನಕ್ಕಾಗಿ ಮೆಸ್ಟ್ರಾಟಜಿಕ್ ಔಟ್ ಸೋರ್ಸಿಂಗ್ ಪ್ರೈ. ಲಿ. ಯನ್ನು ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಇದಕ್ಕೆ ಅಗತ್ಯ ಮೂಲಸೌಕರ್ಯವನ್ನು ಕಂಪನಿಯವರೇ ಅಳವಡಿಸಿಕೊಳ್ಳಲಿದ್ದಾರೆ ಎಂದು ಸವದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.