ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಹಿನ್ನಲೆಯಲ್ಲಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭಾದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ, ಕನ್ನಡ ಪರ ಸಂಘಟನೆಗಳು, ರೈತ ಮುಖಂಡರು, ಸಾಹಿತಿಗಳು ಸರಳ ದಸರಾ ನಡೆಸಲು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 22ಕ್ಕೆ ದಸರಾ ಆಚರಣೆ ನಡೆಯಲಿದ್ದು, ರಾಜ್ಯದಲ್ಲಿ ಬರ ತಲೆದೋರಿರುವುದರಿಂದ ಸರಳವಾಗಿ ದಸರಾ ಆಚರಣೆ ನಡೆಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಅಂತಿಮ ತೀರ್ಮಾನಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ದಸರಾ ಉದ್ಘಾಟಕರಾಗಿ ಯಾರನ್ನು ಕರೆಸಬೇಕು ಎಂಬ ಬಗ್ಗೆಯೂ ಇನ್ನಷ್ಟೇ ಅಂತಿಮ ತೀರ್ಮಾನಕೈಗೊಳ್ಳಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.