ಬೆಂಗಳೂರು: ರಾಜ್ಯಕ್ಕೆ ಆಗಮಿಸುವ ಕೇರಳ ಮತ್ತು ಮಹಾರಾಷ್ಟ್ರಗಳ ಬಸ್ಸುಗಳಿಗೆ ಯಾವುದೇ ರೀತಿಯ ನಿರ್ಬಂಧಗಳನ್ನು ಹೇರಲಾಗಿಲ್ಲ. ಆದರೆ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಂತರಾಜ್ಯ ಬಸ್ಸು ಸಂಚಾರಕ್ಕೆ ಸಂಬಂಧಿಸಿದಂತೆ ಸವದಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದೊಳಕ್ಕೆ ಬರುವ ಯಾವುದೇ ಬಸ್ಸುಗಳನ್ನು ತಡೆಯುವಂತಿಲ್ಲ. ಆದರೆ ರಾಜ್ಯದೊಳಕ್ಕೆ ಬರುವ ಎಲ್ಲಾ ಪ್ರಯಾಣಿಕರೂ ಕಡ್ಡಾಯವಾಗಿ ಕೊರೋನಾ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯ ಎಂದು ಹೇಳಿದ್ದಾರೆ. ಅದರೊಂದಿಗೆ ಪ್ರಯಾಣದ ವೇಳೆ ಎಲ್ಲಾ ರೀತಿಯ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ನೆರೆಯ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ರಾಜ್ಯದೊಳಕ್ಕೆ ಬರುವ ಪ್ರಯಾಣಿಕರು ಕೆಲವೊಂದು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ವಾಹನಗಳಿಗೆ, ಜನರಿಗೆ ನಿರ್ಬಂಧ ಹೇರಲಾಗಿಲ್ಲ. ಬದಲಾಗಿ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು, ಕೊರೋನಾ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯ ಎಂದು ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.