ಬೆಂಗಳೂರು: ಶೀಘ್ರದಲ್ಲೇ ನಗರದ 9 ರಸ್ತೆಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತಾ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಳ್ಳಲಾಗಿರುವ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಗರದ 5 ರಸ್ತೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಶೀಘ್ರವೇ ಮತ್ತೆ 9 ರಸ್ತೆಗಳ ಕಾಮಗಾರಿ ಕೆಲಸವನ್ನು ಸಂಪೂರ್ಣ ಮಾಡಲಾಗುವುದು. ಉಳಿದ 32 ರಸ್ತೆಗಳ ಕಾಮಗಾರಿಯನ್ನು ಮೇ ಅಂತ್ಯದೊಳಗೆ ಮುಗಿಸಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಈಗಾಗಲೇ ರಾಜಭವನದ ರಸ್ತೆಯ ಕಾಮಗಾರಿ ಒಂದು ಕಡೆಯಿಂದ ಸಂಪೂರ್ಣಗೊಂಡಿದೆ. ಇನ್ನು ಬೀದಿ ದೀಪಗಳನ್ನು ಅಳವಡಿಸುವುದು, ಸಸಿ ನೆಡುವುದು ಮೊದಲಾ ಕೆಲಸಗಳಷ್ಟೇ ಬಾಕಿ ಇದ್ದು, ಅವುಗಳನ್ನೂ ಶೀಘ್ರದಲ್ಲೇ ಸಂಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಸೈಕಲ್ ಪಥ ನಿರ್ಮಿಸಿ ಮರಗಳ ಸುತ್ತ ಒಂದೇ ವಿನ್ಯಾಸ ಬರುವಂತೆ ರಚನಾ ಕಾಮಗಾರಿಗಳನ್ನು ನಿರ್ವಹಿಸಬೇಕು. ಅನಧಿಕೃತ ಕೇಬಲ್ಗಳನ್ನು ತೆರವು ಮಾಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.