ವಿಜಯನಗರ: ಭಾರತ ಇತ್ತೇಚಿನ ವರ್ಷಗಳಲ್ಲಿ ತನ್ನ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿದೆ ಎನ್ನುವುದಕ್ಕೆ ಹಲವು ಸಾಕ್ಷಿಗಳು ನಮ್ಮ ಕಣ್ಣ ಮುಂದಿದೆ. ಆ ಪಟ್ಟಿಯಲ್ಲಿ ಇದೀಗ ಕೇವಲ 18 ಗಂಟೆಗಳಲ್ಲಿ ನಿರ್ಮಿಸಲಾದ 25. ಕಿ.ಮೀ. ರಾಷ್ಟ್ರೀಯ ಹೆದ್ದಾರಿಯೂ ಸೇರಿಕೊಂಡಿದೆ.
ನೆರೆಯ ರಾಜ್ಯ ಮಹಾರಾಷ್ಟ್ರದ ಸೊಲ್ಲಾಪುರದಿಂದ ಕರ್ನಾಟಕದ ವಿಜಯನಗರವನ್ನು ಸಂಪರ್ಕಿಸುವ 110 ಕಿ. ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ಮೇಲ್ದರ್ಜೆಗೇರಿಸುವ ಕಾಮಗಾರಿ ವೇಗವಾಗಿ ಸಾಗುತ್ತಿದೆ. ಈ ಯೋಜನೆಗೆ ಕೇಂದ್ರ ಸರ್ಕಾರವು ರೂ. 1,540 ಕೋಟಿ ಮೊತ್ತವನ್ನು ವ್ಯಯಿಸುತ್ತಿದೆ. ಡಾಂಬರೀಕರಣಗೊಳ್ಳುತ್ತಿರುವ ಚತುಷ್ಪಥ ರಸ್ತೆಯ ಒಂದು ಮಾರ್ಗದ 25.54 ಕಿ. ಮೀ ಉದ್ದದ ರಸ್ತೆಯನ್ನು ಕೇವಲ 18 ಗಂಟೆಗಳಲ್ಲಿ ಮುಗಿಸಿ ಮಹತ್ವದ ದಾಖಲೆ ನಿರ್ಮಿಸಿದೆ.
ಈ ಕಾಮಗಾರಿಯು ಲಿಮ್ಕಾ ಪಟ್ಟಿಯಲ್ಲಿ ಸೇರಲು ಒಟ್ಟು 500 ಕಾರ್ಮಿಕರ ಅವಿರತ ಪ್ರಯತ್ನದಿಂದಾಗಿ ಸಾಧ್ಯವಾಗಿದೆ ಎನ್ನಲಾಗಿದೆ. ಈ ದಾಖಲೆಯು ದೇಶದ ಲಿಮ್ಕಾ ಪುಸ್ತಕದಲ್ಲಿ ಅಚ್ಚಾಗಿದೆ. ಒಟ್ಟಾರೆ ಈ ಪರಿಶ್ರಮ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದಲೂ ಶ್ಲಾಘನೆಗೆ ಪಾತ್ರವಾಗಿದೆ. ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಈ ಬೆಳವಣಿಗೆಯು ಪ್ರೇರಣಾದಾಯಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.