ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣ ದರದಲ್ಲಿ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದೆ. ಆದರೆ ಜನರೂ ಸಹ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದರ ಹೆಚ್ಚಳದ ಯಾವುದೇ ಪ್ರಸ್ತಾಪವೂ ಇಲ್ಲ. ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವವರಲ್ಲಿ ಹೆಚ್ಚಿನವರು ಮಧ್ಯಮ ಮತ್ತು ಬಡ ವರ್ಗಗಳಿಂದ ಬಂದವರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಅಂತಹ ವರ್ಗಗಳಿಗೆ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ ಎಂದು ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.