ಬೆಂಗಳೂರು: ವಿಧಾನ ಪರಿಷತ್ ಸಚಿವಾಲಯದ ಸಿಬ್ಬಂದಿಗೆ ರಾಜ್ಯ ಸರ್ಕಾರ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಡಿ ದರ್ಜೆ ನೌಕರರಿಗೆ ಅನ್ವಯಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಪುರುಷರಿಗೆ ಬಿಳಿ ಬಣ್ಣದ ಬಟ್ಟೆ ಮತ್ತು ಮಹಿಳಾ ಕೆಲಸಗಾರರಿಗೆ ಮೆರೂನ್ ಬಣ್ಣದ ಬಟ್ಟೆಯನ್ನು ಬಳಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಹಾಗೆಯೇ ಸಚಿವಾಲಯದ ಕಾರು ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸುವಂತೆ ಈ ಆದೇಶದಲ್ಲಿ ಸೂಚಿಸಲಾಗಿದೆ.
ಈ ಸಂಬಂಧ ಮಾತನಾಡಿರುವ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್ ಜಯಂತಿ, ಪರಿಷತ್ತಿನ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಲ್ಲಿ, ನೌಕರರಲ್ಲಿ ಶಿಸ್ತು ಮೂಡಿಸುವುದಕ್ಕೆ, ಕರ್ತವ್ಯ ಪ್ರಜ್ಞೆ ಹೆಚ್ಚಾಗುವಂತೆ ಮಾಡುವ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಆದೇಶದ ಉಲ್ಲಂಘನೆಯಾದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಹಾಗೆಯೇ ಮಾರ್ಚ್ 1 ರಿಂದ ತೊಡಗಿದಂತೆ ಬಯೋಮೆಟ್ರಿಕ್ ಆಧರಿತ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ 15 ರಿಂದ ನೀತಿ ಸಂಹಿತೆಗೆ ಅನುಗುಣವಾಗಿ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ತಿಳಿಸಿದ್ದಾರೆ.
ಅದೇ ರೀತಿಯಲ್ಲಿ ವಿಧಾನಸೌಧದ ಕಾರಿಡಾರ್ಗಳಲ್ಲಿ ಗುಂಪಾಗಿ ಸೇರುವುದು, ಮೊಬೈಲ್ನಲ್ಲಿ ಮಾತನಾಡಿಕೊಂಡು ಕಾಲಹರಣ ಮಾಡುವುದು ಮೊದಲಾದವುಗಳನ್ನು ನಿಷೇಧಿಸಲಾಗಿದೆ. ಹಾಗೆಯೇ ಕಚೇರಿಯಲ್ಲಿರುವ ಹಿರಿಯ ಅಧಿಕಾರಿಗಳು ತಮ್ಮ ಕೈಕೆಳಗಿನ ನೌಕರರಿಗೆ ಅಗತ್ಯ ಸಂದರ್ಭಗಳಲ್ಲಿ ಮಾತ್ರವೇ ಕಚೇರಿಯ ಅವಧಿಯಲ್ಲಿ ಹೊರ ಹೋಗಲು ಅನುಮತಿ ನೀಡತಕ್ಕದ್ದು ಎಂದು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.