ಹೈದರಾಬಾದ್: ಆಂಧ್ರಪ್ರದೇಶದ ತಿರುಮಲದ ಭಗವಾನ್ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ವೆಂಕಟೇಶ್ವರ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಟಿಟಿಡಿ ಮಂಡಳಿಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಗವಾನ್ ವೆಂಕಟೇಶ್ವರ ದೇವಾಲಯವನ್ನು ನಿರ್ಮಿಸಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಒಂದು ತುಂಡು ಭೂಮಿಯನ್ನು ನೀಡುವಂತೆ ಕೋರಲು ನಿರ್ಧರಿಸಿದೆ.
ಟಿಟಿಡಿಯ ಟ್ರಸ್ಟ್ ಬೋರ್ಡ್ನ ಅಧ್ಯಕ್ಷ ವೈ. ವಿ. ಸುಬ್ಬಾ ರೆಡ್ಡಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ಪರ್ಯಾಯವಾಗಿ, ನಾವು ಟಿಟಿಡಿಯ ಪರವಾಗಿ ಭಜನ್ ಮಂದಿರಂ (ಭಜನೆ ಮಂದಿರ) ಅಥವಾ ಸೌಲಭ್ಯಗಳ ಸಂಕೀರ್ಣವನ್ನು ನಿರ್ಮಿಸುತ್ತೇವೆ” ಎಂದು ಹೇಳಿದ್ದಾರೆ.
ಈ ನಡುವೆ, ಮುಂಬೈ ಮತ್ತು ಜಮ್ಮುವಿನಲ್ಲಿ ಭಗವಾನ್ ವೆಂಕಟೇಶ್ವರ ದೇವಾಲಯಗಳನ್ನು ನಿರ್ಮಿಸಲು ಟಿಟಿಡಿಯ ಮಂಡಳಿ ಈಗಾಗಲೇ ನಿರ್ಧರಿಸಿದೆ. ರೆಡ್ಡಿ ಅವರ ಪ್ರಕಾರ, ಎರಡೂ ದೇವಾಲಯಗಳಿಗೆ ಭೂಮಿ ಪೂಜೆ ಸಮಾರಂಭವನ್ನು ಶೀಘ್ರದಲ್ಲೇ ನಡೆಸಲಾಗುತ್ತಿದೆ.
ಟಿಟಿಡಿಯ ಮಂಡಳಿಯು ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ ಮತ್ತು ಅದರ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.