ಕೋಲಾರ: ಜಿಲ್ಲೆಯ ಕೆಸಿ ವ್ಯಾಲಿ ನೀರು ಹರಿದು ಬಹುತೇಕ ಕೆರೆಗಳು ತುಂಬಿವೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು ಎಂದು ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೀನುಗಾರಿಕೆ ಮತ್ತು ಬಂದರು ಇಲಾಖೆಗೆ ಒಳಪಟ್ಟ ಕಾಮಗಾರಿಗಳನ್ನು, ಮೀನುಗಾರಿಕಾ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುಗುವುದು. ಇದೇ ಸಂದರ್ಭದಲ್ಲಿ ಬಂಗಾರಪೇಟೆ ತಾಲ್ಲೂಕಿನ ಮೀನುಮರಿ ಉತ್ಪಾದನಾ ಕೇಂದ್ರಕ್ಕೆ ಆಗಮಿಸಿ ನೈರ್ಮಲ್ಯ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆಯೂ ಅವರು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಮೀನುಗಾರಿಕೆಗೆ ಸಂಬಂಧಿಸಿದಂತೆ ಅಗತ್ಯ ಸೌಕರ್ಯಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಉತ್ತನೂರು ಆರ್ಎಎಸ್ ಫಾರ್ಮ್, ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಜಾರಿಗೊಳಿಸುವುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.