ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿಯ ವರೆಗಿನ ತರಗತಿಗಳ ಆರಂಭ ಸದ್ಯಕ್ಕಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
1 ರಿಂದ 5 ನೇ ತರಗತಿ ವರೆಗೆ ಮಾರ್ಚ್ ಒಂದರಿಂದ ತೊಡಗಿದಂತೆ ಶಾಲಾರಂಭ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ನೆರೆಯ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿಯೂ ಕೊರೋನಾ ಹೆಚ್ಚುವ ಭೀತಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ 1-5 ನೇ ತರಗತಿ ವರೆಗಿನ ಆರಂಭ ಸದ್ಯಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಶಾಲಾರಂಭಕ್ಕೆ ಸಂಬಂಧಿಸಿದಂತೆ ಮುಂದಿನ ವಾರದಲ್ಲಿ ಮತ್ತೊಮ್ಮೆ ತಜ್ಞರ ಜೊತೆಗೆ ಸಭೆ ನಡೆಸಲಾಗುತ್ತದೆ. ತಜ್ಞರ ಸಲಹೆ, ಆರೋಗ್ಯ ಇಲಾಖೆಯ ಮಾರ್ಗದರ್ಶನ, ವರದಿಯನ್ನು ಆರಂಭಿಸಿ ಮುಂದುವರೆಯಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಸೋಂಕು ಹೆಚ್ಚುತ್ತಿರುವ ಕಾರಣ ಶಾಲೆಗಳನ್ನು ಆರಂಭ ಮಾಡುವುದು ಸರಿಯಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಯಷ್ಟೇ ಆರೋಗ್ಯವೂ ಮಹತ್ವದ್ದಾಗಿದ್ದು ಈ ನಿಟ್ಟಿನಲ್ಲಿಯೂ ಸರ್ಕಾರ ಕಾಳಜಿ ವಹಿಸಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.