ಬೆಂಗಳೂರು : ರಾಜ್ಯದಲ್ಲಿ ಅನರ್ಹ ಎನಿಸಿದ ಸುಮಾರು 2,28,188 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದಾಗಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯಲು ಯಾವುದೇ ರೀತಿಯ ಅರ್ಹತೆ ಹೊಂದಿರದ ವ್ಯಕ್ತಿಗಳಿಂದ ಈ ಅಕ್ರಮ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಹಾಗೆಯೇ 3.07 ಕೋಟಿ ರೂ. ಗಳಷ್ಟು ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳು 10.90 ಲಕ್ಷ ಮತ್ತು 1.16 ಕೋಟಿ ಗಳಷ್ಟು ಬಿಪಿಎಲ್ ಪಡಿತರ ಚೀಟಿಗಳು ಬಳಕೆಯಲ್ಲಿವೆ. ಅಕ್ರಮ ಬಿಪಿಎಲ್ ಕಾರ್ಡುಗಳ ಪತ್ತೆಗೆ ಕೆಲವು ಮಾನದಂಡಗಳನ್ನು ನಿಗದಿ ಮಾಡಲಾಗಿದ್ದು, ಅದರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ. 2018-19 ರಿಂದ 2020-21 ರ ಅವಧಿಯಲ್ಲಿ ಪಡಿತರ ಅಕ್ರಮ ಸಾಗಾಟ, ದಾಸ್ತಾನು ಆರೋಪದಡಿ 786 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.