ನವದೆಹಲಿ: ದೇಶದ 5957 ರೈಲ್ವೆ ನಿಲ್ದಾಣಗಳಲ್ಲಿ ಈವರೆಗೆ ವೈ-ಫೈ ಆಧಾರಿತ ಇಂಟರ್ನೆಟ್ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಗ್ರಾಮೀಣ ಭಾರತದಲ್ಲಿ ತನ್ನ ನೆಟ್ವರ್ಕ್ ಅನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಪಿಎಂ ವಾಣಿ ಸಕ್ರಿಯ ಸಮುದಾಯ ವೈ-ಫೈ ಸೇವೆಗಳನ್ನು ಒದಗಿಸಲು ತನ್ನ ಸಹಕಾರಿ ಬ್ರಾಡ್ಬ್ಯಾಂಡ್ ಸೇವೆಗಳ ಮಾದರಿಯನ್ನು ಬಳಸಲು ರೈಲ್ವೆ ಟೆಲ್ ದೂರಸಂಪರ್ಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ/
ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿದ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು, ಒಎಫ್ಸಿಯನ್ನು ನಿಯೋಜಿಸಿರುವ ರೈಲ್ವೆ ನಿಲ್ದಾಣಗಳಲ್ಲಿ ಸೆಕೆಂಡಿಗೆ 10 ಗಿಗಾ ಬಿಟ್ಗಳಂತೆ ಹೆಚ್ಚಿನ ಸಾಮರ್ಥ್ಯದ ಬ್ಯಾಕ್ಬೋನ್ ಅನ್ನು ರೈಲ್ಟೆಲ್ ಹೊಂದಿದೆ ಎಂದಿದ್ದಾರೆ.
ದೂರಸಂಪರ್ಕ ಇಲಾಖೆಯಿಂದ ಪ್ರಸ್ತಾವನೆ ಮತ್ತು ಅದರ ನಿಯಮಗಳು ಮತ್ತು ಷರತ್ತುಗಳನ್ನು ಅಂಗೀಕರಿಸುವುದರ ಆಧಾರದ ಮೇಲೆ ಅನುಷ್ಠಾನದ ಸಮಯ ಇರುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.